ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್


ಉಡುಪಿಯ ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ಕೂಟ ಏರ್ಪಡಿಸಿರುವ ಪೇಜಾವರ ಶ್ರೀಗಳ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಕೋಮುಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಶ್ರೀಗಳು ಮಠಧಲ್ಲಿ ಇಫ್ತಾರ್‌ಕೂಟ ಏರ್ಪಡಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡಿದೆ ಎಂದು ತಿಳಿಸಿದ್ದಾರೆ.
 
ಸಮುದಾಯಗಳ ಮಧ್ಯೆ ಬಿಕ್ಕಟ್ಟು ಸೃಷ್ಟಿಸಲು ಕೋಮುವಾದಿಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಕೋಮುಸೌಹಾರ್ದತೆಯನ್ನು ಕಾಪಾಡುವಲ್ಲಿ ಶ್ರೀಗಳು ಶ್ರಮಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಪೇಜಾವರ ಶ್ರೀಗಳ ವಿರುದ್ಧ ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮಸೇನೆ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.  


Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್