ಭಗವಾನ್ ರಾಮ ಬಿಜೆಪಿಯನ್ನು ಶಿಕ್ಷಿಸುತ್ತಾನೆ: ಲಾಲು ಪ್ರಸಾದ್


ಪಾಟ್ನಾ: ಭಗವಾನ್ ಶ್ರೀರಾಮನ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಭಗವಾನ್ ರಾಮನೇ ಬಿಜೆಪಿಯನ್ನು ಶಿಕ್ಷಿಸುತ್ತಾನೆ ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. 
ರಾಮನ ಹೆಸರಿನಲ್ಲಿ ರಾಜಕೀಯ ಮಾಡುವುದು ತಪ್ಪು ಹಾಗೂ ನೈತಿಕತೆಗೆ ವಿರುದ್ಧವಾದದ್ದು ಎಂದು ದೀಪಾವಳಿ ಸಂದರ್ಭದಲ್ಲಿ ಲಾಲು ಪ್ರಸಾದ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮನ ಹೆಸರಿನಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದು, ಪ್ರತಿಯೊಬ್ಬರಿಗೂ ತಮ್ಮ ಧರ್ಮ, ಸಂಪ್ರದಾಯಗಳನ್ನು ಪೂಜೆಗಳನ್ನು ಪಾಲಿಸಲು ಮುಕ್ತ ಅವಕಾಶವಿದೆ. ಆದರೆ ಬಿಜೆಪಿ ನಾಯಕರು, ಅದರಲ್ಲಿಯೂ ಪ್ರಮುಖವಾಗಿ ಯೋಗಿ ಆದಿತ್ಯನಾಥ್ ರಾಜಕೀಯ ನಾಟಕವಾಡುತ್ತಿದ್ದಾರೆ, ಜನತೆ ಅವರ ನಾಟಕವನ್ನು ಅರ್ಥಮಾಡಿಕೊಳ್ಳುತ್ತಾರೆ" ಎಂದಿದ್ದಾರೆ.  
ನೋಟು ನಿಷೇಧಗೊಳಿಸಿ ಜನರ ಜೀವನವನ್ನು ಸಂಕಷ್ಟಕ್ಕೆ ತಳ್ಳಿದ್ದರಿಂದ, ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವವರನ್ನು,  ಆರ್ ಎಸ್ಎಸ್ ಹಾಗೂ ಬಿಜೆಪಿಯನ್ನು ರಾಮನೇ ಶಿಕ್ಷಿಸುತ್ತಾನೆ, ಇದು ಶತಸಿದ್ಧ ಏಕೆಂದರೆ ರಾಮ ಭಾರತೀಯರ ಹೃದಯದಲ್ಲಿ ನೆಲೆಸಿದ್ದಾನೆ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್