ಯಶಸ್ವಿ ಸದ್ಭಾವನಾ ಉಪವಾಸ ಸತ್ಯಾಗ್ರಹ: ಲುಕ್ಮಾನ್



ಮಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಶಾಂತಿ, ಸಹೋದರತೆ ಹಾಗೂ ಸಹಿಷ್ಣುತೆಗಾಗಿ ಮಂಗಳವಾರ ತೊಕ್ಕೊಟ್ಟು ಬಸ್ಸು ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಮತ್ತು ನಾಡಿನ ಮತೀಯ ಸಾಮರಸ್ಯಕ್ಕಾಗಿ "ಸದ್ಭಾವನಾ ಉಪವಾಸ ಸತ್ಯಾಗ್ರಹ" ಕಾರ್ಯಕ್ರಮವನ್ನು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭ ಧರ್ಮಸ್ಥಳ ಭೇಟಿ ನೀಡಿದ್ದಾಗ, ವಿಶೇಷ ವಿಮಾನದ ಮೂಲಕ ಕಾರಾಗಲಿ, ಹೆಚ್ಚುವರಿ ಹೆಲಿಕಾಪ್ಟರ್‌ಗಳಾಗಲಿ ಬಂದಿರಲಿಲ್ಲ, ಸರಳ ಜೀವನದ ಜತೆಗೆ ಬಡಜನರಿಗೆ ಬೇಕಾದ ರೀತಿಯಲ್ಲಿ ಆಡಳಿತ ನಡೆಸಿದಂತಹ ಇಂದಿರಾಗಾಂಧಿ ಅವರ ಕಾರ್ಯಚಟುವಟಿಕೆಗಳು ದೇಶಕ್ಕೆ ಮಾದರಿ ಎಂದು ಹೇಳಿದರು.

ರಾಜ್ಯ ಸರಕಾರದ ಮುಖ್ಯಸಚೇತಕ ಐವನ್ ಡಿಸೋಜ ಮಾತನಾಡಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸ್ವಾಭಿಮಾನದ ಬದುಕು ರೂಪಿಸಿದವರು. ತೊಕ್ಕೊಟ್ಟುವಿನಲ್ಲಿ ಅವರ ಪುಣ್ಯತಿಥಿಯ ಅಂಗವಾಗಿ ಆರಂಭಗೊಂಡ ಉಪವಾಸ ಕಾರ್ಯಕ್ರಮ ಪ್ರಪಂಚದಾದ್ಯಂತ ನಡೆಯಲಿ, ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ ಎಂದರು.

ಬೆಳಗ್ಗೆ 10 ಗಂಟೆಗೆ ಆರಂಭವಾದ ಉಪವಾಸ ಸತ್ಯಾಗ್ರಹವು ಸಂಜೆ 6 ಗಂಟೆಯ ವರೆಗೆ ನಡೆಯಿತು.ಈ ಕಾರ್ಯಕ್ರಮವು ಕೆಪಿಸಿಸಿ ಪ್ರ.ಕಾರ್ಯದರ್ಶಿ ಪಿ ವಿ ಮೋಹನ್ ರವರ ನೇತೃತ್ವದಲ್ಲಿ ನಡೆಯಿತು ಮತ್ತು ಇವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ರವರು ಬೆಂಬಲವಾಗಿ ನಿಂತಿದ್ದರು. 

ಈ ಕಾರ್ಯಕ್ರಮದಲ್ಲಿ ಕೆಎಂಡಿಸಿಯ ಅಧ್ಯಕ್ಷರಾದ ಎಂ ಎ ಗಫೂರ್ ,ಇಂಟಕ್ ರಾಜ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ,ಕೆಪಿಸಿಸಿ ಕಾರ್ಯದರ್ಶಿಯಾದ ಮಮತ ಗಟ್ಟಿ,  ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಉಳ್ಳಾಲ ದರ್ಗಾ ಅಧ್ಯಕ್ಷರಾದ ಅಬ್ದುಲ್ ರಶೀದ್ ,ಜಿಲ್ಲಾ ಕಾಂಗ್ರೆಸ್ನ ಲೀಗಲ್ ಸೆಲ್ನ ಪ್ರ.ಕಾರ್ಯದರ್ಶಿಯಾದ ದಿನಕರ್ ಶೆಟ್ಟಿ, ಕರಾವಳಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾದ ಯು.ಬಿ ಸಲೀಂ,  ರಾಜ್ಯ ಯುವ ಕಾಂಗ್ರೆಸ್ನ ಪ್ರ.ಕಾರ್ಯದರ್ಶಿಯಾದ ಸುಹೈಲ್ ಕಂದಕ್ , ಉಳ್ಳಾಲ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಸ್ಮಾನ್ ಕಲ್ಲಾಪು, ಜಿಲ್ಲಾ ಇಂಟಕ್ನ ಪ್ರ.ಕಾರ್ಯದರ್ಶಿಯಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷರುಗಳು, ಪಂಚಾಯಿತಿ ಸದಸ್ಯರು, ಮಹಿಳಾ ಕಾಂಗ್ರೆಸ್ನ ಸದಸ್ಯರು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಯುವ ಇಂಟಕ್ನ ಸದಸ್ಯರು ಹಾಜರಿದ್ದರು. ನಝರ್ ಶಾ ಪಠೋರಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದ ನಂತರ ಮಾತನಾಡಿದ ಲುಕ್ಮಾನ್ ರವರು ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಸರ್ವರಿಗು ಧನ್ಯವಾದವನ್ನು ತಿಳಿಸಿದರು.

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್