ಪಟಾಕಿ ಜತೆ ಆಜಾನ್ ಹೋಲಿಸಿದ ತ್ರಿಪುರಾ ರಾಜ್ಯಪಾಲ: ವಿವಾದ


ಅಗರ್ತಲ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ತ್ರಿಪುರಾದ ರಾಜ್ಯಪಾಲ ತಥಾಗತ ರಾಯ್ ಅವರು ಧ್ವನಿವರ್ಧಕಗಳಲ್ಲಿ ‘ಆಜಾನ್’ ಹೇಳುವುದರ ಜತೆ ಹೋಲಿಕೆ ಮಾಡಿದ್ದು ವಿವಾದಕ್ಕೆ ಗುರಿಯಾಗಿದೆ.
ಪಟಾಕಿ ಸಿಡಿಸುವ ವಿಚಾರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ‘ಪ್ರತಿ ದೀಪಾವಳಿ ಸಂದರ್ಭದಲ್ಲಿಯೂ ಪಟಾಕಿಗಳಿಂದ ಶಬ್ದ ಮಾಲಿನ್ಯವಾಗುತ್ತದೆ ಎಂಬ ವಿವಾದ ಶುರುವಾಗುತ್ತದೆ. ಆದರೆ, ಮುಂಜಾನೆ 4.30ಕ್ಕೆ ಕೇಳಿಬರುವ ಆಜಾನ್ ಬಗ್ಗೆ ವಿವಾದವಾಗುವುದಿಲ್ಲ’ ಎಂದಿದ್ದಾರೆ.
ಆಜಾನ್‌ನಿಂದ ಶಬ್ದ ಮಾಲಿನ್ಯವಾಗುವ ಬಗ್ಗೆ ಜಾತ್ಯತೀತವಾದಿಗಳು ಸುಮ್ಮನಿರುವ ಬಗ್ಗೆ ಉಲ್ಲೇಖಿಸಿದ ಅವರು, ಧ್ವನಿವರ್ಧಕ ಬಳಸಬೇಕೆಂದು ಕುರ್‌ ಆನ್‌ನಲ್ಲಿ ಹೇಳಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಿರ್ಬಂಧ ಪಟಾಕಿ ಸಿಡಿಸುವುದರ ಮೇಲೆ ನಿರ್ಬಂಧ ವಿಧಿಸಲಾಗಿರುವ ಹಿನ್ನೆಲೆಯಲ್ಲಿ ಅವರು ಈ ಟ್ವೀಟ್ ಮಾಡಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ರಾಜ್ಯಪಾಲರ ಟ್ವಿಟರ್ ಸಂದೇಶಕ್ಕೆ ಅನೇಕ ಮಂದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್