ಮಿತ್ತಬೈಲ್ ಜಬ್ಬಾರ್ ಉಸ್ತಾದ್ ನಿಧನಕ್ಕೆ ಬಿ.ಕೆ ಹರಿಪ್ರಸಾದ್ ತೀವ್ರ ಶೋಕ
ಮಿತ್ತಬೈಲು ಉಸ್ತಾದ್ ಎಂದೇ ಖ್ಯಾತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಹಾ ವಿದ್ವಾಂಸರಲ್ಲಿ ಒಬ್ಬರಾಗಿದ್ದ ಜಬ್ಬಾರ್ ಉಸ್ತಾದರ ನಿಧನಕ್ಕೆ ರಾಜ್ಯಸಭಾ ಸದಸ್ಯರಾಗಿರುವ ಬಿ.ಕೆ ಹರಿಪ್ರಸಾದ್ ರವರು ತೀವ್ರ ಶೋಕ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಕೋಮು ಸೌಹಾರ್ದತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಆಧ್ಯಾತ್ಮಿಕತೆ ಶಕ್ತಿಯ ಮೂಲಕ ವಿಶಿಷ್ಟ ಸೇವೆ ಸಲ್ಲಿಸುತ್ತಾ ಜಾತಿ, ಮತಗಳ ಭೇಧವಿಲ್ಲದೆ ಎಲ್ಲ ವರ್ಗದ ಜನರೊಂದಿಗೆ ಪ್ರೀತಿ-ವಿಶ್ವಾಸದೊಂದಿಗೆ ವ್ಯವಹರಿಸುತ್ತಿದ್ದ ಉಸ್ತಾದ್ ನಿಜಕ್ಕೂ ಜಿಲ್ಲೆಯ ಆಸ್ತಿಯಾಗಿದ್ದರು. ಇದೀಗ ಅವರ ನಿಧನವು ಜಿಲ್ಲೆಯ ಜನತೆಯ ಪಾಲಿಗೆ ಸಹಿಸಲಾರದ ನೋವನ್ನು ತಂದಿದೆ ಎಂದು ತಿಳಿಸಿದರು.
ಭಗವಂತನು ಉಸ್ತಾದರ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಅವರ ಅಭಿಮಾನಿಗಳಿಗೆ, ಸಮುದಾಯಕ್ಕೆ ಮತ್ತು ಸಮಾಜಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿ.ಕೆ ಹರಿಪ್ರಸಾದ್ ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Comments
Post a Comment